ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದ ಮಾಜಿ ಸಚಿವ ಆರ್.ಅಶೋಕ್
Update: 2023-09-08 13:35 GMT
ಮಂಡ್ಯ: ʼಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಇಲ್ಲʼ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಶುಕ್ರವಾರ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯಕ್ಕೆ ಬಿಜೆಪಿ ನಾಯಕರ ನಿಯೋಗದೊಂದಿಗೆ ಭೇಟಿ ನೀಡದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼ ಯಾವುದೇ ಹೊಂದಾಣಿಕೆ ಇಲ್ಲ ಎಂದು ದೆಹಲಿ ನಾಯಕರು ಫೋನ್ ಮಾಡಿ ತಿಳಿಸಿದ್ದಾರೆʼʼ ಎಂದು ಸ್ಪಷ್ಟಪಡಿಸಿದರು.
ʼʼ ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಮೀಕ್ಷೆ ಮಾಡಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆʼʼ ಎಂದು ಅವರು ತಿಳಿಸಿದರು.