ಎಸೆಸೆಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆ ಇಲ್ಲ: ಸರಕಾರ ಸ್ಪಷ್ಟನೆ

Update: 2024-11-28 20:03 IST
photo of students writing exam

ಸಾಂದರ್ಭಿಕ ಚಿತ್ರ 

  • whatsapp icon

ಬೆಂಗಳೂರು: 2024-25ನೆ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿದ್ದು, ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಸ್ಪಷ್ಟಪಡಿಸಿದೆ.

ಗುರುವಾರ ಮಂಡಳಿಯು ಪ್ರಕಟನೆ ಹೊರಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದೆ ಎಂದಿದೆ.

ಸದ್ಯದಲ್ಲೇ ಎಸೆಸೆಲ್ಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News