ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ತೀರ್ಮಾನ ಕೈಗೊಂಡಿಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ

Update: 2023-08-26 14:11 GMT

ಹಾಸನ: ʼರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದ. ಅಂತಹ ತೀರ್ಮಾನವನ್ನು ನಾವು ತೆಗೆದುಕೊಂಡಿಲ್ಲʼ ಎಂದು ಆಹಾರ ನಾಗಾರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. 

ನಗರದ ಪ್ರವಾಸಿ ಮಂದಿರದಲ್ಲಿ ಶಮಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. 

ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ʼʼವೈಟ್ ಬೋರ್ಡ್ ನಾಲ್ಕು ಚಕ್ರ ವಾಹನ ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ನಿಯಮ ಬಿಜೆಪಿ ಸರ್ಕಾರದ ಅವದಿಯದ್ದು, ಸದ್ಯಕ್ಕೆ ಈ ವಿಚಾರದಲ್ಲಿ ಯಾವುದೆ ತೀರ್ಮಾನವಿಲ್ಲ. 1.28 ಕೋಟಿ ಜನರು ಪಡಿತರ ಚೀಟಿ ಹೊಂದಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡಿ ಎಲ್ಲರಿಗೂ ಅಕ್ಕಿ ವಿತರಣೆ ಮಾಡುವ ಬಗ್ಗೆ ಕ್ರಮವಹಿಸುತ್ತೇವೆ. ಯಾರು ಅರ್ಹರಿರುತ್ತಾರೆ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲʼʼ ಎಂದು ಭರವಸೆ ನೀಡಿದರು.

ʼʼಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆʼʼ ಎಂದು ಇದೇ ವೇಳೆ ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News