ರಾಜ್ಯದಲ್ಲಿ ಬದುಕಿಗೆ ಗ್ಯಾರಂಟಿ ಇಲ್ಲ: ಬಿ.ಎಸ್. ಯಡಿಯೂರಪ್ಪ

Update: 2024-04-21 14:56 GMT

ಬೆಂಗಳೂರು: ಕಾಂಗ್ರೆಸ್ ಸರಕಾರ ಒಂದೇ ವರ್ಷದಲ್ಲಿ ರಾಜ್ಯವನ್ನು ಯುದ್ದ ಭೂಮಿಯನ್ನಾಗಿ ಪರಿವರ್ತಿಸಿದ್ದು, ಬದುಕಿಗೆ ಗ್ಯಾರಂಟಿ ಇಲ್ಲದಂತೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತನ್ನದೇ ಪಕ್ಷದ ನಾಯಕನ ಮಗಳ ಹತ್ಯೆಗೆ ನ್ಯಾಯ ಒದಗಿಸಲು ಆಗಿಲ್ಲ ಎಂದು ಆರೋಪಿಸಿದರು.

ಮಂಡ್ಯದಲ್ಲಿ ಪೊಲೀಸರು ಒತ್ತಾಯಪೂರ್ವಕವಾಗಿ ಕೇಸರಿ ಧ್ವಜವನ್ನು ಕೆಳಗಿಳಿಸಿದ್ದಾರೆ. ವಿಧಾನಸೌಧದಲ್ಲಿ ದುಷ್ಕರ್ಮಿಗಳು ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರ ಏನೂ ಕ್ರಮ ಕೈಗೊಂಡಿಲ್ಲ.ಹಾಗೇ, ಮಹಿಳೆಯರಿಗೆ ಭದ್ರತೆ, ನೀರಿಗೆ ಇಲ್ಲ ಗ್ಯಾರಂಟಿ. ಗಲಭೆಕೋರರಿಗೆ, ಉಗ್ರರಿಗೆ ರಕ್ಷಣೆ ಗ್ಯಾರಂಟಿ, ವಿದ್ಯುತ್ ದರ ಹೆಚ್ಚಳದ ಗ್ಯಾರಂಟಿ ನೀಡಲಾಗಿದೆ ಎಂದು ಟೀಕಿಸಿದರು.

ರಾಜ್ಯದ 28 ಕ್ಷೇತ್ರಗಳನ್ನೂ ಪ್ರಧಾನಿ ಮೋದಿ ಆಶೀರ್ವಾದದಿಂದ ಗೆದ್ದು ಬರುತ್ತೇವೆ.ಆದರೆ, ಕಾಂಗ್ರೆಸ್ ಪಕ್ಷವೂ ಗೆಲುವು ಸಾಧಿಸುವ ಮೂರು ನಾಲ್ಕು ಕ್ಷೇತ್ರದ ಹೆಸರು ಹೇಳಲಿ. ಅಧಿಕಾರ ಇದೆ ಎಂಬ ದರ್ಪ ಇದೆ ಅವರಿಗೆ. ಜಾಹೀರಾತು ಮೂಲಕ ಜನರ ದಾರಿ ತಪ್ಪಿಸುವ ಭ್ರಮೆಯಲ್ಲಿದ್ದಾರೆ ಎಂದ ಅವರು, ರಾಜ್ಯದಲ್ಲಿ ಒಂದೂ ಕ್ಷೇತ್ರವನ್ನು ಸಹ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದಿಲ್ಲ. ಪುನಃ ಎನ್‍ಡಿಎ ಒಕ್ಕೂಟವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News