ಹನಿ ಟ್ರ್ಯಾಪ್ ಪ್ರಕರಣದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Update: 2025-03-21 11:49 IST
ಹನಿ ಟ್ರ್ಯಾಪ್ ಪ್ರಕರಣದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
  • whatsapp icon

ಬೆಂಗಳೂರು, ಮಾ. 21: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು, ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಿ ನ್ಯಾಯಾಂಗ ತನಿಖೆ ನಡೆಸಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಿಎಂ ಮೇಲಿನಂತೆ ಉತ್ತರಿಸಿದರು.

ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವರು ಉತ್ತರಿಸಿದ್ದಾರೆ. ಪ್ರಕರಣದಲ್ಲಿ ಯಾರೇ ಆಗಿದ್ದರೂ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು.ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ ಎಂದರು.

ಹನಿ ಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ. ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News