ಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

Update: 2023-12-04 14:17 GMT

ಬೆಳಗಾವಿ: ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳುವ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಸರಕಾರ ಕಾರ್ಯ ನಿರ್ವಾಹಣೆ ಮಾಡಬೇಕಾಗಿದೆ. ಹಾಗಾಗಿ, ಗೌರವಧನದ ಹೊರತು ಖಾಯಂಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದರು.

ಪ್ರತಿಯೊಬ್ಬರಿಗೂ ಮಾಸಿಕವಾಗಿ 12 ಸಾವಿರ ರೂ. ಗೌರವಧನವನ್ನು ನೀಡುತ್ತೇವೆ. ತಾತ್ಕಾಲಿಕ ನೌಕರರಾಗಿರುವುದರಿಂದ ಅವರ ಸೇವೆಯನ್ನು ಖಾಯಂಗೊಳಿಸಲು ಬರುವುದಿಲ್ಲ. ಸದಸ್ಯರ ಕೋರಿಕೆಯನ್ನು ಸರಕಾರ ಪರಿಗಣಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ನೇಮಿಸಿಕೊಳ್ಳುತ್ತಾರೆ. 9 ತಿಂಗಳಿಗೆ ಮಾತ್ರ ಇವರ ಸೇವೆಯನ್ನು ಬಳಸಿಕೊಳ್ಳಲಾಗುತ್ತದೆ ಎಂದು ವಿವರಿಸಿದರು.

ಕಲ್ಯಾಣ ಕರ್ನಾಟಕ ಶಿಕ್ಷಕರ ನೇಮಕಾತಿಗೆ ಬದ್ಧ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಕರ ಕೊರತೆಯನ್ನು ತುಂಬುವುದರ ಜೊತೆಗೆ ಈ ಭಾಗದ ಶಾಲೆಗಳಿಗೆ ಅಗತ್ಯವಿರುವ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಆದ್ಯತೆಯಲ್ಲಿ ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ಶಶೀಲ್ ನಮೋಶಿ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಣ ಆಯುಕ್ತಾಲಯದಲ್ಲಿ ಹಲವು ವರ್ಷಗಳಿಂದ ಬೀಡು ಬಿಟ್ಟಿರುವ ಸಿಬ್ಬಂದಿಗಳ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News