ಜಿ20 ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸದಿರುವುದು ತಪ್ಪು: ಸಿಎಂ ಸಿದ್ದರಾಮಯ್ಯ

Update: 2023-09-09 10:16 GMT

ಹುಬ್ಬಳ್ಳಿ: ಜಿ20 ಶೃಂಗಸಭೆ ದೆಹಲಿಯಲ್ಲಿ ಇಂದಿನಿಂದ ಆರಂಭಗೊಂಡಿದೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಔತಣಕೂಟಕ್ಕೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. 

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ʼʼಮಲ್ಲಿಕಾರ್ಜುನ ಖರ್ಗೆಯವರು ಕೇವಲ ಕಾಂಗ್ರೆಸ್ ಅಧ್ಯಕ್ಷರಲ್ಲ, ಅಧಿಕೃತವಾಗಿ ಲೋಕಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪುʼʼ ಎಂದು ಆಕ್ಷೇಪಿಸಿದರು. 

ʼʼನಾನು ಬೇರೆ ಕೆಲಸ ಇರೋ ಕಾರಣಕ್ಕೆ ಔತಣಕೂಟಕ್ಕೆ ಹೋಗತಿಲ್ಲʼʼ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು. 

ಇನ್ನು ಅನಾರೋಗ್ಯದ ಹಿನ್ನೆಲೆ ಮಾಜಿ ಪ್ರಧಾನಿಗಳಾದ ಎಚ್​ಡಿ ದೇವೇಗೌಡ ಅವರು ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ(ಹಿಂದಿನ ಟ್ವಿಟರ್) ಪೋಸ್ಟ್ ಮಾಡಿ ದೇವೇಗೌಡ ಅವರು ಜಿ20 ಶೃಂಗಸಭೆ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News