ಅನಗತ್ಯ ಹೇಳಿಕೆ ಕೊಟ್ಟರೆ ನೋಟಿಸ್: ಕಾಂಗ್ರೆಸ್ ಶಾಸಕರಿಗೆ ಡಿ.ಕೆ. ಶಿವಕುಮಾರ್ ಎಚ್ಚರಿಕೆ

Update: 2023-10-28 05:16 GMT

ಬೆಂಗಳೂರು: "ಸರಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಅವರು ಇಂದು (ಶನಿವಾರ)  ಹೈದರಾಬಾದ್ ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಂಡ್ಯದ ಶಾಸಕ ರವಿ ಗಣಿಗಾ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ ಈ ರೀತಿ ಪ್ರತಿಕ್ರಿಯಿಸಿದರು.

"ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ" ಎಂದು ತಿಳಿಸಿದರು.

́ಅನಗತ್ಯ ಹೇಳಿಕೆ ಕೊಟ್ಟರೆ ನೊಟೀಸ್ʼ

"ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ" ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News