ಭ್ರೂಣ ಹತ್ಯೆಯಿಂದ ತಗ್ಗಿದ ಮಹಿಳೆಯರ ಸಂಖ್ಯೆ: ಗೃಹಸಚಿವ ಜಿ.ಪರಮೇಶ್ವರ್

Update: 2023-12-14 11:38 GMT

ಬೆಳಗಾವಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಭ್ರೂಣ ಹತ್ಯೆಯಿಂದಾಗಿ ಪುರುಷರ ಸಂಖ್ಯೆಗಿಂತ ಮಹಿಳೆಯರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿಂದು ಸದಸ್ಯ ವೈ.ಎಂ.ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರೂಣಹತ್ಯೆ ಇತ್ತೀಚೆಗೆ ಒಂದು ಸಾಮಾಜಿಕ ಪಿಡುಗು. ಇದನ್ನು ಎಲ್ಲರೂ ಕೂಡ ಪಕ್ಷಬೇಧ ಮರೆತು ನಿಯಂತ್ರಣಕ್ಕೆ ತರಬೇಕು. ಜಿಲ್ಲಾ ಮಟ್ಟದಲ್ಲಿ ಭ್ರೂಣಹತ್ಯೆ ತಡೆಗಟ್ಟಲು ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಪೊಲೀಸ್ ಇಲಾಖೆ ಹೀಗೆ ಹಲವಾರು ಇಲಾಖೆಗಳ ಸಹಭಾಗಿತ್ವದಲ್ಲಿ ಸಮಿತಿಯು ಇರುತ್ತದೆ. ಕಾಲಕಾಲಕ್ಕೆ ಸಮಿತಿಯ ಸದಸ್ಯರು ಎಲ್ಲಿ ಪ್ರಕರಣಗಳು ಜರುಗುತ್ತವೆಯೋ ಅಲ್ಲಿ ಭೇಟಿಕೊಟ್ಟು ಇದನ್ನು ತಡೆಯಬೇಕು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News