ನಮ್ಮ ಸರಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು : ಸಿಎಂ ಸಿದ್ದರಾಮಯ್ಯ

Update: 2024-01-31 08:15 GMT

ಬೆಂಗಳೂರು: ನಮ್ಮ ಸರಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು.

ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ

ಕೆಲವು ಕಡೆ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, "ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News