ಓಲಾ, ಉಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಡಿ.ಕೆ. ಶಿವಕುಮಾರ್

Update: 2023-09-11 17:03 GMT

 ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಖಾಸಗಿ ಬಸ್ ಮಾಲಕರಿಗೆ ಶಕ್ತಿ ಯೋಜನೆಯಿಂದ ತೊಂದರೆ ಆಗಿರುವುದು ನಿಜ. ಆದರೆ ಓಲಾ, ಉಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ ಇರಬಹುದು ಎಂದು ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸೋಮವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಖಾಸಗಿ ಬಸ್ ಮಾಲಕರಿಗೆ ಆಗಿರುವ ತೊಂದರೆಯನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಆಟೋ ಚಾಲಕರು ತೊಂದರೆ ಅನುಭವಿಸುತ್ತಿದ್ದರೂ ಅದನ್ನು ಬಗಹರಿಸುತ್ತೇವೆ. ನಮಗೂ ಅದರ ಬಗ್ಗೆ ಅರಿವಿದೆ ಎಂದರು.

ಸರಕಾರವನ್ನು ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಸರಕಾರ ಖಂಡಿತವಾಗಿ ಅವರ ಎಲ್ಲ ಸಮಸ್ಯೆಗಳನ್ನು ಕೇಳುತ್ತದೆ ಮತ್ತು ಸೂಕ್ತ ಪರಿಹಾರ ಒದಗಿಸುತ್ತದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಒಳ್ಳೆಯದಾಗಿದೆಯಲ್ಲ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News