ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಅರ್ಜಿ; ನವೆಂಬರ್ 30 ಕೊನೆಯ ದಿನ

Update: 2023-10-27 11:22 GMT

ಮಂಗಳೂರು: 2023-24 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ.

ʼಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕ ಆಗಿದ್ದು, ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in/  ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ,ಮೌಲಾನಾ ಅಬ್ದುಲ್ ಕಲಾಂ ಅಝಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ನಿಗದಿಪಡಿಸಿದ ದಿನಾಂಕದಂದು ಸಲ್ಲಿಸುವುದು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದುʼ

ʼಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ dom.karnataka gov.in/dakshina_kannada/public ಹಾಗೂ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದುʼ ಎಂದು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News