ಕುಮಾರ ಪರ್ವತ ಚಾರಣಕ್ಕೆ ಆನ್‌ಲೈನ್‌ ಟಿಕೆಟ್‌; ನಾಳೆಯಿಂದ ಚಾಲನೆ

Update: 2024-10-02 05:13 GMT

ಬೆಂಗಳೂರು, ಅ.2: ಕುಮಾರ ಪರ್ವತಕ್ಕೆ ನಿರ್ದಿಷ್ಟ ಸಂಖ್ಯೆಯ ಚಾರಣಿಗರಿಗೆ ಮಾತ್ರವೇ ಅವಕಾಶ ಕಲ್ಪಿಸಲು ಸ್ಥಗಿತಗೊಳಿಸಲಾಗಿದ್ದ ಚಾರಣ ನಾಳೆಯಿಂದ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರಕಟಿಸಿದ್ದಾರೆ.

70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಂಗಳೂರು ಕಬ್ಬನ್ ಉದ್ಯಾನದಿಂದ ಲಾಲ್ ಬಾಗ್ ವರೆಗೆ ಅರಣ್ಯ ಇಲಾಖೆ ಆಯೋಜಿಸಿದ್ದ ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆಯಲ್ಲಿ ಪಾಲ್ಗೊಂಡು ಲಾಲ್ ಬಾಗ್ ನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಎಲ್ಲ ಚಾರಣ ಪಥಗಳಿಗೂ ಒಂದೇ ಅಂತರ್ಜಾಲ ತಾಣದಲ್ಲಿ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಲಾಗಿದ್ದು, ನಾಳೆ ಮಧ್ಯಾಹ್ನ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ವೆಬ್ ಸೈಟ್ ಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಕುಮಾರ ಪರ್ವತ ಚಾರಣ ಪಥಕ್ಕೆ ಜ.26, 27ರಂದು ಸಾವಿರಾರು ಜನರು ಆಗಮಿಸಿದ್ದ ಹಿನ್ನೆಲೆಯಲ್ಲಿ ಚಾರಣವನ್ನು ಸ್ಥಗಿತಗೊಳಿಸಲಾಗಿತ್ತು.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News