ಜು.18 ರಂದು ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ; ಸಿದ್ಧತೆ ವೀಕ್ಷಿಸಿದ ಕಾಂಗ್ರೆಸ್​ ನಾಯಕರು

Update: 2023-07-16 00:01 IST
ಜು.18 ರಂದು ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ; ಸಿದ್ಧತೆ ವೀಕ್ಷಿಸಿದ ಕಾಂಗ್ರೆಸ್​ ನಾಯಕರು
  • whatsapp icon

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿರೋಧ ಪಕ್ಷಗಳ ನಾಯಕರ ಸಭೆಯ ಸಿದ್ದತೆಗಳನ್ನು ನಗರದ ತಾಜ್ ವೆಸ್ಟ್ ಎಂಡ್ ಹೋಟೆಲಿಗೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಸ್ತುವಾರಿ ಸುರ್ಜೇವಾಲಾ, ಗೃಹ ಸಚಿವ ಪರಮೇಶ್ವರ್ ಅವರು ಪರಿಶೀಲನೆ ನಡೆಸಿದರು.

ಕಳೆದ ತಿಂಗಳು ಬಿಹಾರದ ಪಾಟ್ನಾದಲ್ಲಿ ನಡೆದ ಬೃಹತ್ ಪ್ರತಿಪಕ್ಷಗಳ ಸಭೆಯ ನಂತರ, ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್​ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಬಿಹಾರ ಸಿಎಂ ನಿತೀಶ್ ಕುಮಾರ್, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ನಾಯಕರಾದ ತೇಜಸ್ವಿ ಯಾದವ್, ಅಖಿಲೇಶ್ ಸಿಂಗ್ ಯಾದವ್, ಶರದ್ ಪವಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News