ಅಸ್ತಿತ್ವಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಶೋ: ಬಸವರಾಜ ಬೊಮ್ಮಾಯಿ ವ್ಯಂಗ್ಯ

Update: 2023-07-17 17:19 GMT

ಬೆಂಗಳೂರು, ಜು.17: ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೇ ಕಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೆ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಯುಪಿಎ ಅಂಗ ಪಕ್ಷಗಳ ಸಭೆಯಿಂದ ಏನೂ ಪ್ರಯೋಜನವಿಲ್ಲ. ಮೋದಿ ಅವರದ್ದು ಮೇರು ವ್ಯಕ್ತಿತ್ವ, ರಾಷ್ಟ್ರದಲ್ಲಿ 9 ವರ್ಷದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸೇರಿ ಎಲ್ಲ ರಂಗದಲ್ಲೂ ದೊಡ್ಡ ಬದಲಾವಣೆ ತಂದು ದೇಶದವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದರು.

ಪ್ರತಿಪಕ್ಷಗಳು ಅವರ ಅಸ್ತಿತ್ವವನ್ನೆ ಅವರು ಕಾಪಾಡಲು ಸಾಧ್ಯವಿಲ್ಲ. ಇಲ್ಲಿ ಬಂದು ಶೋ ಮಾಡೊ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಅಂತ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕುವುದು ನಿಶ್ಚಿತ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News