ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ʼಆರೆಂಜ್ ಅಲರ್ಟ್ʼ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದ್ದು, ಉಡುಪಿ, ಉತ್ತರ ಕನ್ನಡ ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಸಂಜೆಯಿಂದ ನಾಳೆ ಮಧ್ಯಾಹ್ನದವರೆಗೆ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಕೊಡಲಾಗಿದೆ.
ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಅಲ್ಲಿನ ಬಹುತೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುಸ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಮತ್ತು ರಾಯಚೂರು, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.