"ನಮ್ಮ ಶಾಲೆ ನಮ್ಮ ಜವಾಬ್ದಾರಿ": ಸರಕಾರಿ ಶಾಲೆಗಳ ಅಭಿವೃದ್ಧಿ, ಬಲವರ್ಧನೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Update: 2024-03-05 07:58 GMT

Photo: X/@CMofKarnataka

ಬೆಂಗಳೂರು: "ನಮ್ಮ ಶಾಲೆ ನಮ್ಮ ಜವಾಬ್ದಾರಿ" ಸರಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು.

ಸಿದ್ದರಾಮಯ್ಯ ಅವರು ತಾವು ಓದಿದ ಸರಕಾರಿ ಕುಪ್ಪೇಗಾಲದ ಹಿರಿಯ ಪ್ರಾಥಮಿಕ ಶಾಲೆ , ಕೆ.ಪಿ.ಎಸ್ ಸಿದ್ದರಾಮನಹುಂಡಿ ಶಾಲೆಗೆ 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News