ಪಾದರಾಯನಪುರ | ಬಿಬಿಎಂಪಿ, ಆಶಾ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿ ಆರೋಪ ಪ್ರಕರಣ : 375 ಆರೋಪಿಗಳ ವಿರುದ್ಧದ ಕೇಸು ರದ್ದುಗೊಳಿಸಿದ ಹೈಕೋರ್ಟ್

Update: 2024-03-19 14:32 GMT

ಬೆಂಗಳೂರು: ಪಾದರಾಯನಪುರದಲ್ಲಿ ಬಿಬಿಎಂಪಿ, ಆಶಾ ಕಾರ್ಯಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ 375 ಆರೋಪಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ನವಾಜ್ ಪಾಷಾ ಸೇರಿ 375 ಆರೋಪಿಗಳ ವಿರುದ್ಧ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. 2020 ರ ಏಪ್ರಿಲ್ 19 ರಂದು ಕೋವಿಡ್ 19 ಸೋಂಕಿತರ ಪತ್ತೆ ಕಾರ್ಯದ ವೇಳೆ ಬಿಬಿಎಂಪಿ, ಆಶಾ ಕಾರ್ಯಕರ್ತರಿಗೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಟೇಬಲ್, ಟೆಂಟ್ ಕಿತ್ತೆಸೆದು ದಾಂಧಲೆ ನಡೆಸಿದ ಆರೋಪ ಮೇಲೆ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕಾಯ್ದೆ, ಐಪಿಸಿ ಸೆ.188 ಅಡಿಯ ಕೇಸು ದಾಖಲಿಸಲಾಗಿತ್ತು. ಆದರೆ ಸಕ್ಷಮ ಪ್ರಾಧಿಕಾರ, ಖಾಸಗಿ ದೂರು ದಾಖಲಿಸದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣವನ್ನು ತಾಂತ್ರಿಕ ಕಾರಣಗಳಿಂದ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News