ಪಾಲಾರ್ ಬಾಂಬ್ ಸ್ಫೋಟ ಪ್ರಕರಣ: ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ನಿಧನ

Update: 2023-12-15 17:44 GMT

ಹನೂರು : "ಪಾಲಾರ್ ಬಾಂಬ್ ಸ್ಫೋಟ" ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಸಂದನಪಾಳ್ಯ ಗ್ರಾಮದಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ

 ಜ್ಞಾನಪ್ರಕಾಶ್ (68) ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿದ್ದು ಕಾಡುಗಳ್ಳನ ಮುಖ್ಯ ಸಹಚರಾರಾಗಿದ್ದರು‌. ಭಯಾನಕ ಎನಿಸುವ "ಪಾಲಾರ್ ಬಾಂಬ್ ಸ್ಫೋಟ" ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಜ್ಞಾನಪ್ರಕಾಶ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ‌ಬಳಿಕ, ಸುಪ್ರೀಂ ಕೋರ್ಟ್ 2014 ರಲ್ಲಿ ಗಲ್ಲು ಶಿಕ್ಷೆ ರದ್ದುಗೊಳಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

29 ವರ್ಷಗಳಿಂದ ಜೈಲಿನಲ್ಲೇ ಇದ್ದು ಮೂರು ವರ್ಷಗಳಿಂದ ಶ್ವಾಸಕೋಸ ಕ್ಯಾನ್ಸರ್ ಅವರನ್ನು ಬಾಧಿಸಿತ್ತು. ಮಾನವೀಯತೆ ಆಧಾರದಲ್ಲಿ ಸುಪ್ರೀಂ ಜಾಮೀನು ಮಂಜೂರು ಮಾಡಿದ್ದರಿಂದ ಚಾಮರಾಜನಗರ ನ್ಯಾಯಾಲಯವು ಇಬ್ಬರಿಂದ ಶೂರಿಟಿ ಪಡೆದು ಜಾಮೀನು ಮಂಜೂರು ಮಾಡಿತ್ತು.

ಜಾಮೀನಿನಿಂದ ಜ್ಞಾನಪ್ರಕಾಶ್ ಬಿಡುಗಡೆಯಾಗಿ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದರು ಆದರೆ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳುತ್ತಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಂದಾಯ್ಯಪಾಳ್ಯ ಗ್ರಾಮದ ಅವರ ಸ್ವಗೃಹದಲ್ಲಿ‌ ನಿಧನ ಹೊಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News