ಪ್ಯಾರೀಸ್ ಒಲಂಪಿಕ್ಸ್: ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ: ಸಚಿವ ಬಿ.ನಾಗೇಂದ್ರ

Update: 2023-12-08 10:43 GMT

ಬೆಳಗಾವಿ: ಮುಂದಿನ ವರ್ಷ ಪ್ಯಾರೀಸ್‍ನಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಸಾಮಥ್ರ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ಶುಕ್ರವಾರ ಪರಿಷತ್ತಿನ ಕಲಾಪದಲ್ಲಿ ಬಿಜೆಪಿ ಸದಸ್ಯ ಎಸ್.ರುದ್ರೇಗೌಡ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಯಾರೀಸ್‍ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22 ನೇ ಸಾಲಿನಿಂದ ಅಮೃತ ಕ್ರೀಡಾ ದತ್ತು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಒಲಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮಥ್ರ್ಯ ಹೊಂದಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಪೋಷಿಸಿ, ಸಾಧನೆಗೆ ಅಗತ್ಯವಾದ ಬೆಂಬಲ ವ್ಯವಸ್ಥೆ ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದರು.

ಇನ್ನೂ, ಈ ಯೋಜನೆಯ ಫಲಾನುಭವಿಗಳಿಗೆ ತರಬೇತಿಗಾಗಿ ಕ್ರೀಡಾ ವಿಜ್ಞಾನದ ಬೆಂಬಲ, ಪೌಷ್ಟಿಕ ಆಹಾರಕ್ಕಾಗಿ, ತರಬೇತಿಗೆ ಅಗತ್ಯವಿರುವ ಕ್ರೀಡಾ ಕಿಟ್ ಖರೀದಿಸಲು, ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು, ದೈನಂದಿನ ಅಗತ್ಯತೆಗಾಗಿ ಮತ್ತು ಇತರೆ ವೆಚ್ಚಗಳಿಗಾಗಿ ತಲಾ 10 ಲಕ್ಷ ವಾರ್ಷಿಕ ಗರಿಷ್ಠ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News