ಪರಿಷತ್ ಉಪ ಚುನಾವಣೆ : ಕಾಂಗ್ರೆಸ್‌ನ ಬಸನಗೌಡ ಬಾದರ್ಲಿ ಅವಿರೋಧ ಆಯ್ಕೆ

Update: 2024-07-05 15:10 GMT

ಬೆಂಗಳೂರು : ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿನ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಜು.12ರಂದು ಉಪ ಚುನಾವಣೆ ನಿಗದಿಪಡಿಸಲಾಗಿತ್ತು. ಜು.5ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಕಾಂಗ್ರೆಸ್ ಪಕ್ಷದ ಬಸನಗೌಡ ಬಾದರ್ಲಿ ಮಾತ್ರ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News