ಪರಿಷತ್‌ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ - ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ.ಕೆ. ಹೆಸರು ಘೋಷಣೆ

Update: 2024-05-15 10:56 GMT

ಬೆಂಗಳೂರು : ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ.ಕೆ. ಅವರ ಹೆಸರನ್ನು ಜೆಡಿಎಸ್‌ ಪಕ್ಷ ಘೋಷಣೆ ಮಾಡಿದೆ.

ಈ ಕುರಿತು ಬುಧವಾರ ಪತ್ರಿಕಾ ಪ್ರಕರಣೆ ಹೊರಡಿಸಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News