ಮೇಲ್ಮನೆಯಲ್ಲಿ ಮೂರು ವಿಧೇಯಕಗಳಿಗೆ ಅಂಗೀಕಾರ

Update: 2023-12-15 11:28 GMT

ಬೆಳಗಾವಿ: ನ್ಯಾಯವಾದಿಗಳು ಯಾವುದೇ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲು ಹಾಗೂ ಅವರ ಮೇಲಿನ ಹಿಂಸೆಯನ್ನು ನಿಷೇಧಿಸಲು ಹಾಗೂ ಅವರಿಗೆ ರಕ್ಷಣೆ ಒದಗಿಸಲು ಅವಕಾಶ ಕಲ್ಪಿಸಿರುವ 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಸೇರಿ ಒಟ್ಟು ಮೂರು ವಿಧೇಯಕಗಳಿಗೆ ಮೇಲ್ಮನೆಯಲ್ಲಿಯೂ ಅಂಗೀಕಾರ ದೊರೆಯಿತು.

ಶುಕ್ರವಾರ ವಿಧಾನ ಪರಿಷತ್ತಿನ ಕಲಾಪದಲ್ಲಿಂದು ವಿಧೇಯಕ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ವಕೀಲರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಅವರಿಗೆ ಕಾನೂನಾತ್ಮಕ ರಕ್ಷಣೆ ಅವಶ್ಯಕತೆ ಇದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಕೂಡ ಆದೇಶ ನೀಡಿದೆ. ಭಾರತೀಯ ನ್ಯಾಯ ವ್ಯವಸ್ಥೆಯಲ್ಲಿ ಪೊಲೀಸರ ರೀತಿ, ವಕೀಲರು ಮುಖ್ಯ ಎಂದರು.

ಆನಂತರ ಸದಸ್ಯರಾದ ತೇಜಸ್ವಿನಿಗೌಡ, ನಾಗರಾಜ್ ಯಾದವ್, ಕೋಟಾ ಶ್ರೀನಿವಾಸ್ ಪೂಜಾರಿ, ಮರಿತಿಬ್ಬೇಗೌಡ ಸೇರಿದಂತೆ ಪ್ರಮುಖರು ವಿಧೇಯಕ ಕುರಿತು ಮಾತನಾಡಿದರು. ಬಳಿಕ ಸಚಿವರು, ಸದಸ್ಯರು ನೀಡಿರುವ ಸಲಹೆಗಳನ್ನು ಪರಿಗಣಿಸಿಯೇ ವಿಧೇಯಕವನ್ನು ಜಾರಿಗೆ ಮಾಡಿದ್ದೇವೆ ಎಂದು ಹೇಳಿದರು. ಬಳಿಕ ಸಭಾಪತಿ ಹೊರಟ್ಟಿ ಅವರು ಧ್ವನಿ ಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದರು.

ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ(ಎರಡನೇ ತಿದ್ದುಪಡಿ) ವಿಧೇಯಕ-2023 ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಮಂಡಿಸಿದ ವಿಧಾನಸಭೆಯಿಂದ ಅಂಗೀಕಾರವಾದ 2023ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕಕ್ಕೂ ಮೇಲ್ಮನೆಯಲ್ಲಿಯೂ ಅಂಗೀಕಾರ ದೊರೆಯಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News