ಎನ್‍ಇಪಿ ರದ್ದು ಮಾಡಿದರೆ ಜನಾಂದೋಲನ: ಬಸವರಾಜ ಬೊಮ್ಮಾಯಿ ಎಚ್ಚರಿಕೆ

Update: 2023-08-22 18:17 GMT

ಬೆಂಗಳೂರು, ಆ.22: ರಾಜ್ಯ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ಮುಂದಾದರೆ ಜನಾಂದೋಲನ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಪೀಪಲ್ಸ್ ಫೆÇೀರಂ ಫಾರ್ ಕರ್ನಾಟಕ ಎಜುಜೇಶನ್ ಸಂಸ್ಥೆ ವತಿಯಿಂದ ಏರ್ಪಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಜಾರಿಗಾಗಿ ಶಿಕ್ಷಣ ತಜ್ಞರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಎನ್‍ಇಪಿ ವಿರೋಧ ಮಾಡುತ್ತಿರುವುದರಲ್ಲಿ ಆಶ್ಚರ್ಯ ಇಲ್ಲ. ಅಷ್ಟೊಂದು ವಿಸಿಗಳನ್ನು ಕೂಡಿಸಿಕೊಂಡು ಯಾವುದೇ ಚರ್ಚೆ ಮಾಡದೇ ನಿರ್ಣಯ ಕೈಗೊಂಡಿದ್ದಾರೆ. ಅದನ್ನು ಕುಲಪತಿಗಳು ಪ್ರಶ್ನೆ ಮಾಡದೇ ಸುಮ್ಮನೇ ಎದ್ದು ಬಂದಿರುವುದು ದುರಂತ ಎಂದರು.

ಜನರು ಅಭಿವೃದ್ಧಿ ಮಾಡಲು ಅಧಿಕಾರ ಕೊಟ್ಟಿದ್ದಾರೆ, ಹೊರತು ರಾಜ್ಯವನ್ನು ಹಿಂದೆ ಕಳುಹಿಸಲು ಅಲ್ಲ. ಅದಕ್ಕೆ ಪ್ರಜಾಪ್ರಭುತ್ವದಲ್ಲಿ ಅವಕಾಶ ಇಲ್ಲ. ಈ ದೇಶದಲ್ಲಿ ದೊಡ್ಡವರು ತಪ್ಪು ಮಾಡಿದಾಗ ಜನರು ದೊಡ್ಡ ಹೋರಾಟಗಳ ಮೂಲಕ ಬದಲಾವಣೆ ತಂದಿದ್ದಾರೆ. ನೀವು ಅಧಿಕಾರ ಸಿಕ್ಕಿದೆ ಅಂತ ಈ ರೀತಿ ಮಾಡಿದರೆ ಜನ ಪಾಠ ಕಲಿಸುತ್ತಾರೆ ಎಂದರು.

ಸರಕಾರ ಕೇವಲ ತಮಗೆ ಮತ ಹಾಕಿದವರನ್ನು ಮಾತ್ರ ನೋಡದಬಾರದು, ಮಕ್ಕಳು, ವಿದ್ಯಾರ್ಥಿಗಳು, ಪ್ರಾಣಿಗಳು, ಸಸ್ಯ ಶಾಮಲೆ ಎಲ್ಲವನ್ನು ನೋಡಬೇಕು. ನೀವು ಬಿಜೆಪಿಯನ್ನು ವಿರೋಧಿಸಿ, ಅದನ್ನು ಬಿಟ್ಡು ವಿದ್ಯಾರ್ಥಿಗಳಿಗೆ ಏಕೆ ಶಿಕ್ಷೆ ಕೊಡುತ್ತೀರಿ, ಸಿದ್ದರಾಮಯ್ಯ ಒನ್ ಮತ್ತು ಸಿದ್ದರಾಮಯ್ಯ ಟು ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಅವರು ವಿಚಾರ ಮಾಡುವ ಶಕ್ತಿ ಕಳೆದುಕೊಂಡಿದ್ದಾರೊ ಅಥವಾ ಸುತ್ತಲು ಇರುವವರು ಅವರ ದಾರಿ ತಪ್ಪಿಸುತ್ತಿದ್ದಾರೊ ಗೊತ್ತಿಲ್ಲ ಎಂದರು.

ಎಸ್‍ಇಪಿ ಅಂದರೆ ಸೋನಿಯಾಗಾಂಧಿ ಶಿಕ್ಷಣ ನೀತಿ: ಎನ್‍ಇಪಿ ರದ್ದು ಮಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಎನ್‍ಇಪಿ ರದ್ದು ಮಾಡುವುದಾದರೆ, ಪರಮೇಶ್ವರ್, ಎಂಬಿ ಪಾಟೀಲ್ ಒಪ್ಪುತ್ತಾರಾ? ಎನ್‍ಇಪಿ ಅಂದರೆ ನಾಗಪುರ್ ಶಿಕ್ಷಣ ನೀತಿ ಅಂತಾರೆ, ಎಸ್‍ಇಪಿ ಅಂದರೆ ಸೋನಿಯಾಗಾಂಧಿ ಎಜುಕೇಶನ್ ಪಾಲಿಸಿನಾ ಸೋನಿಯಾ ಗಾಂಧಿ ಅಂದರೆ ಇಟಲಿ. ಇಟಲಿ ಅಂದರೆ ಯುರೋಪ್ ಎಜುಕೇಶನ್, ಹಾಗದರೆ ಮೆಕಾಲೆ ಶಿಕ್ಷಣ ನೀತಿ ಜಾರಿಗೆ ತರುತ್ತೀರಾ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿಗಳು, ಮಾಜಿ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ, ಎನ್.ಮಹೇಶ್, ಕೋಟ ಶ್ರೀನಿವಾಸಪೂಜಾರಿ ಸೇರಿದಂತೆ ಇನ್ನಿತರರು ಅಭಿಪ್ರಾಯ ಮಂಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News