ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆ: ಹೆಚ್.ಡಿ ಕುಮಾರಸ್ವಾಮಿ

Update: 2023-09-08 09:56 GMT

ಬೆಂಗಳೂರು: ಕರ್ನಾಟಕ ಸಂಕಷ್ಟದಲ್ಲಿದೆ. ತೀವ್ರ ಬರ-ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ದುರಿತ ದಿನಗಳಲ್ಲಿ ನಾವು ಜನರ ಜತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆ, ನೈತಿಕ ಜವಾಬ್ದಾರಿಯಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೋತಿದ್ದೇವೆ, ನಿಜ. ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ,ಅರ್ಪಣಾಭಾವದಿಂದ ಹೆಜ್ಜೆ ಹಾಕಲೇಬೇಕು.ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳು,ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡರ ಸಾನ್ನಿಧ್ಯದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಸೆ.10ರ ಭಾನುವಾರ ಬೆಳಗ್ಗೆ 10.30ಗಂಟೆಗೆ ಮಹತ್ವದ ಸಭೆ ಕರೆದಿದ್ದೇವೆ ಎಂದು ತಿಳಿಸಿದ್ದಾರೆ.

ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯವರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ, ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ.ನಾನೂ ಸೇರಿ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ತಪ್ಪದೇ ಸಭೆಗೆ ಬನ್ನಿ, ಮುಕ್ತವಾಗಿ ಮಾತನಾಡೋಣ. ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ."ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ.."ಈ ವಿವೇಕವಾಣಿಯೇ ನಮ್ಮ ಪಾಲಿನ ಮೂಲಮಂತ್ರ ಎಂದು ಟ್ವೀಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News