ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ; ಡಿಸಿಎಂ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಸಚಿವರ ನಿಯೋಗ

Update: 2024-08-17 06:29 GMT

ಬೆಂಗಳೂರು:   ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಚಿವರ ನಿಯೋಗ ರಾಜ್ಯಪಾಲರನ್ನು ಇಂದು ಮಧ್ಯಾಹ್ನ ಭೇಟಿ ಮಾಡಲಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ಬೇಟಿ ತೀರ್ಮಾನಿಸಲಾಗಿದೆ.

ರಾಜ್ಯಪಾಲರನ್ನು ಭೇಟಿ ಮಾಡಲಿರುವ ಸಚಿವರ ನಿಯೋಗ ರಾಜ್ಯಪಾಲರಿಗೆ ತಮ್ಮ ಅಭಿಪ್ರಾಯ ತಿಳಿಸಲಿದೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ರಾಜ್ಯಪಾಲರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಆಗ್ರಹಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ  ಅವರು ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News