ಕೇಂದ್ರ ಸರಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

Update: 2024-03-11 15:31 GMT

ಬೆಂಗಳೂರು : ಚುನಾವಣೆಯ ಸಂದರ್ಭದಲ್ಲಿ ಅಕ್ರಮ, ಆಮಿಷ, ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ರಾಮನಗರದ ಕನಕಪುರ ತಾಲೂಕಿನ ಗೌತಮ್ ಎಂ. ಗೌಡ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯವು, ಪ್ರತಿವಾದಿಗಳಾದ ಭಾರತ ಚುನಾವಣಾ ಆಯೋಗ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News