ವಿಶೇಷ ವಿಮಾನದ ಮೂಲಕ ಹೆಚ್​​ಎಎಲ್​​ನಿಂದ ದೆಹಲಿಗೆ ತೆರಳಿದ ಪ್ರಧಾನಿ ಮೋದಿ

Update: 2023-08-26 05:09 GMT

ಬೆಂಗಳೂರು, ಆ. 26: ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗಿನ ಜಾವ ನಗರಕ್ಕೆ ಆಗಮಿಸಿದ್ದರು.

ನಗರದ ಇಸ್ರೋ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು.

ನಂತರ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ತೆರಳಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಧಾನಿಗಳನ್ನು ಬೀಳ್ಕೊಟ್ಟರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News