ಪೋಕ್ಸೊ ಪ್ರಕರಣ | ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ಆದೇಶ
Update: 2024-06-14 11:38 GMT
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶಿದೆ.
ನಿರೀಕ್ಷಣಾ ಜಾಮೀನು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಆದೇಶಿದೆ. ಅಲ್ಲದೆ, ಪೊಲೀಸ್ ವಿಚಾರಣೆಗೆ ಹಾಜರಾಗಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಸೂಚನೆ ನೀಡಿದೆ.
ಯಡಿಯೂರಪ್ಪ ಅವರನ್ನು ಬಂಧಿಸಲು ಸಿದ್ದತೆ ನಡೆಸಿಕೊಂಡಿದ್ದ ಪೊಲೀಸರು ಜಾಮೀನು ರಹಿತ ವಾರೆಂಟ್ ಪಡೆದುಕೊಂಡಿದ್ದರು. ಇದರಿಂದ ಬಂಧನ ಭೀತಿ ಎದುರಿಸುತ್ತಿದ್ದ ಯಡಿಯೂರಪ್ಪ ಅವರು ನಿರೀಕ್ಷಣಾ ಕೋರಿ ಅರ್ಜಿ ಸಲ್ಲಿಸಿದ್ದರು.