ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ರಿಲೀಫ್
Update: 2025-03-14 12:48 IST

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದ ವಿಚಾರಣೆಗೆ ಮಾರ್ಚ್ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪ ಅವರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ.
ಅಲ್ಲದೆ, ಮಾಜಿ ಸಿಎಂ ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್ ಯಡಿಯೂಪ್ಪಗೆ ರಿಲೀಫ್ ಸಿಕ್ಕಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.