ಟಿಪ್ಪು ಸುಲ್ತಾನ್ ರನ್ನು ದೇಶ ದ್ರೋಹಿಯಂತೆ ಬಿಂಬಿಸುವುದು ಸರಿಯಲ್ಲ: ಸಚಿವ ಎಚ್.ಸಿ.ಮಹದೇವಪ್ಪ

Update: 2023-12-18 14:38 GMT

ಮೈಸೂರು: ಮೈಸೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದು ಬಿಡುವುದು ಬೇರೆ ವಿಚಾರ, ಟಿಪ್ಪು ಸುಲ್ತಾನ್ ನಮ್ಮವರಲ್ಲವೇ, ಅವರೇನು ಬೇರೆ ದೇಶದವರಾ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರಶ್ನಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವಂತೆ ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಸರಿಡುವುದು ಬಿಡುವುದು ಬೇರೆ ವಿಚಾರ. ಆದರೆ ಅವರನ್ನು ದೇಶ ದ್ರೋಹಿಯಂತೆ ಬಿಂಬಿಸುವುದು ಸರಿಯಲ್ಲ" ಎಂದು ಹೇಳಿದರು.

ಟಿಪ್ಪು ಸುಲ್ತಾನ್ ಆಡಳಿತವಾದಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಭೂ ಸುಧಾರಣೆ ಕಾಯ್ದೆ ತಂದವರು, ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಿದರು. ಕೆ.ಆರ್.ಎಸ್ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಅಲ್ಲವೇ ಎಂದು ಪ್ರಶ್ನಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ನಮ್ಮ ತಕರಾರಿಲ್ಲ, ಟಿಪ್ಪು ಹೆಸರಿಡುವಂತೆ ಕೆಲವರು ಹೇಳಿದ್ದಾರೆ ಎಂದರು. 

ಲೋಕಸಭೆಯಲ್ಲಿ ನಡೆದಿರುವುದು ಗಂಭೀರವಾದ ರಾಷ್ಟ್ರೀಯ ಭದ್ರತಾ ವಿಚಾರ. ಬೇರೆ ಧರ್ಮದವರು ನೀಡಿದ್ದರೆ ಗತಿ ಏನಾಗುತ್ತಿತ್ತು? ಬಿಜೆಪಿ ಸಂಸದ ಪ್ರತಾಪ್ ಸಿಂಹ ಪಾಸ್ ಕೊಡಿಸಿದ್ದರೆಂಬ ಕಾರಣಕ್ಕೆ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News