ಅಂಚೆ-ಟೆಲಿಕಾಂ ಉದ್ಯೋಗಿಗಳ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ ಆರೋಪ: ಸಂಪೂರ್ಣ ತನಿಖೆ ನಡೆಸಿ ವರದಿ ಸಲ್ಲಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ

Update: 2023-08-04 15:06 GMT

ಬೆಂಗಳೂರು, ಆ.4: ಕರ್ನಾಟಕ ಅಂಚೆ ಮತ್ತು ಟೆಲಿಕಾಂ ಉದ್ಯೋಗಿಗಳ ಗೃಹ ನಿರ್ಮಾಣ ಸಹಕಾರ ಸಂಘವು ಸದಸ್ಯರಿಂದ ಸಂಗ್ರಹಿಸಿದ ಹಣವನ್ನು ದುರುಪಯೋಗ ಮಾಡಿಕೊಂಡ ಬಗ್ಗೆ ಹಾಗೂ ನಿವೇಶನ ಹಂಚಿಕೆಯಲ್ಲಿ ಅಕ್ರಮವೆಸಗಿ ಸದಸ್ಯರಿಗೆ ವಂಚಿಸಿರುವ ಕುರಿತು ಸಂಪೂರ್ಣ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ, ಕರ್ನಾಟಕ ಅಂಚೆ ಮತ್ತು ಟೆಲಿಕಾಂ ಉದ್ಯೋಗಿಗಳ ಗೃಹ ನಿರ್ಮಾಣ ಸಹಕಾರ ಸಂಘವು 316 ಕೋಟಿ ರೂ.ಗಳ ಹಗರಣದಲ್ಲಿ ಭಾಗಿಯಾಗಿರುವ ಕುರಿತು ದಿನಪತ್ರಿಕೆಯೊಂದರಲ್ಲಿ ವರದಿ ಪ್ರಕಟಗೊಂಡಿದೆ ಎಂದು ತಿಳಿಸಿದ್ದಾರೆ.

ಈ ಸಹಕಾರಿ ಸಂಘವು ಸುಮಾರು 3391 ಸದಸ್ಯರು ಮತ್ತು ಸಹಸದಸ್ಯರಿಂದ ಠೇವಣಿ ಸಂಗ್ರಹಿಸಿ, ಖಾಸಗಿ ಅಭಿವೃದ್ಧಿದಾರರೊಂದಿಗೆ ಶಾಮೀಲಾಗಿ ಕೋಟ್ಯಂತರ ರೂ.ಗಳನ್ನು ಕಾನೂನು ಬಾಹಿರವಾಗಿ ವೆಚ್ಚ ಮಾಡಿ ಸದಸ್ಯರಿಗೆ ನಿವೇಶನ ಹಂಚಿಕೆ ಮಾಡದೆ ವಂಚನೆ ಮಾಡಿರುವ ಬಗ್ಗೆ ವರದಿಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸಹಕಾರ ಇಲಾಖೆಯ ವತಿಯಿಂದ ತನಿಖೆ ಮಾಡಿದ್ದರೂ ಯಾವುದೆ ಕ್ರಮವಾಗಿಲ್ಲ ವಾದ್ದರಿಂದ ಈ ಅಕ್ರಮಗಳ ಬಗ್ಗೆ ತನಿಖೆ ನಡೆಸಿ, ಸದಸ್ಯರಿಗೆ ನ್ಯಾಯ ಒದಗಿಸುವಂತೆ ಕೋರಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News