ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಅಂತರ್ ರಾಷ್ಟ್ರೀಯ ವಿಮಾನದ ಕಾರ್ಯಾಚರಣೆ ಮುಂದೂಡಿಕೆ

Update: 2023-08-30 17:06 GMT

ಬೆಂಗಳೂರು, ಆ.30: ಆಗಸ್ಟ್ 31ರಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2ನಿಂದ ಪ್ರಾರಂಭವಾಗಬೇಕಿದ್ದ ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಬಿಐಎಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಆಗಸ್ಟ್ 31ರಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಕಾರ್ಯಾಚರಣೆಗಳನ್ನು ಟರ್ಮಿನಲ್2 ಗೆ ಸ್ಥಳಾಂತರಿಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಈ ಸ್ಥಳಾಂತರ ಕಾರ್ಯವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಆ.31ರಂದೇ ಘೋಷಿಸಲಿದೆ.

ನಮ್ಮ ಪ್ರಯಾಣಿಕರಿಗೆ ಸೂಕ್ತ ಮತ್ತು ತಡೆರಹಿತ ಸ್ಥಿತ್ಯಂತರವನ್ನು ಒದಗಿಸುವ ಸಲುವಾಗಿ ಅಂತಿಮ ಸನ್ನದ್ಧತೆಯ ಪರಿಶೀಲನೆಯ ಸಮಯದಲ್ಲಿ ಕೊನೆಯ ನಿಮಿಷದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಅಂತರರಾಷ್ಟ್ರೀಯ ಕಾರ್ಯಾಚರಣೆಗಳು ಟರ್ಮಿನಲ್ 1ರಲ್ಲಿಯೇ ಮುಂದುವರೆಯಲಿದೆ.

ಈ ನಿರ್ಧಾರದಿಂದ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ. ನಮ್ಮ ಪ್ರಯಾಣಿಕರಿಗೆ ಅತ್ಯುತ್ತಮವಾದ ಪ್ರಯಾಣದ ಅನುಭವ ನೀಡುವ ನಿಟ್ಟಿನಲ್ಲಿ ನಮ್ಮ ಬದ್ಧತೆಯನ್ನು ಮುಂದುವರೆಸಲಿದ್ದೇವೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ, ಮಾಹಿತಿ ಪಡೆಯುವಂತೆ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ವಿನಂತಿಸುತ್ತೇವೆ ಎಂದು ಬಿಐಎಎಲ್ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News