ವಿದ್ಯುತ್ ಬೇಡಿಕೆ ಹೆಚ್ಚಾಗಿದೆ, ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ: ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 13: ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆಯಾದ್ದರಿಂದ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 900 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ. ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ
ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ ಎಂದು ಪ್ರಶ್ನಿಸಿದರು.
ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ
https://bit.ly/3tfd2Ro ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.