ಪರಮೇಶ್ವರ್ ಪ್ರಬುದ್ಧರಿದ್ದಾರೆ ; ರಾಹುಲ್ ಗಾಂಧಿ ರೀತಿ ಮಾತಾಡಿದರೆ ಹೇಗೆ?

Update: 2024-11-25 09:49 GMT

ಪ್ರಹ್ಲಾದ್‌ ಜೋಶಿ/ಜಿ.ಪರಮೇಶ್ವರ್‌

ಹೊಸದಿಲ್ಲಿ : "ಕರ್ನಾಟಕ ಗೃಹ ಮಂತ್ರಿ ಜಿ.ಪರಮೇಶ್ವರ್‌ ಪ್ರಜ್ಞಾವಂತ, ಪ್ರಬುದ್ಧ ರಾಜಕಾರಣಿ. ಅವರೂ ರಾಹುಲ್ ಗಾಂಧಿಯಂತೆ ಮಾತನಾಡಿದರೆ ಹೇಗೆ?" ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಸಂಸತ್ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮದವರ ಜತೆ ಮಾತನಾಡಿದ ಅವರು, ʼರಾಜ್ಯದಲ್ಲಿ ಪರಮೇಶ್ವರ್ ಒಬ್ಬ ಪ್ರಬುದ್ಧ ರಾಜಕಾರಣಿ ಇದ್ದಾರೆ. ಅವರೂ ಹೀಗೆ ಇವಿಎಂ ಮೇಲೆ ಅನುಮಾನವಿದೆ ಎನ್ನುವುದು ಸರಿ ಕಾಣುವುದಿಲ್ಲʼ ಎಂದು ಜೋಶಿ ಪ್ರತಿಕ್ರಿಯಿಸಿದರು.

ʼಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 135 ಸೀಟುಗಳಿಂದ ಗೆದ್ದಾಗಲೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಇವರಿಗೆ ಆಗ ಇಲ್ಲದ ಇವಿಎಂ ಮೇಲಿನ ಅನುಮಾನ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದ ತಕ್ಷಣ ಬರುತ್ತದೆ ಎಂದರೆ ಹೇಗೆ?ʼ ಎಂದು ಪ್ರಶ್ನಿಸಿದರು.

ಪರಮೇಶ್ವರ್ ಹೇಳಿಕೆ ಅರ್ಥಹೀನ:

ಮಹಾರಾಷ್ಟ್ರದಲ್ಲಿ ಇವಿಎಂ ಗೋಲ್ ಮಾಲ್ ಆಗಿದೆ ಎಂಬ ಗೃಹ ಸಚಿವ ಪರಮೇಶ್ವರ್ ಅವರ ಆರೋಪವನ್ನು ತಳ್ಳಿಹಾಕಿದ ಕೇಂದ್ರ ಸಚಿವ ಜೋಶಿ, ಇವಿಎಂ ದೋಷದಿಂದಲೇ ಮಹಾರಾಷ್ಟ್ರ ಚುನಾವಣೆಯನ್ನು ಕಾಂಗ್ರೆಸ್ ಸೋತಿದೆ ಎಂದಿರುವ ಅವರ ಹೇಳಿಕೆ ನಿಜಕ್ಕೂ ಅರ್ಥಹೀನ ಎಂದು ಟೀಕಿಸಿದರು.

ಜಾರ್ಖಂಡ್ ಹೇಗೆ ಗೆದ್ದರು?:

ʼಮಹಾರಾಷ್ಟ್ರ ಸಾಲಿಗೆ ಇವಿಎಂ ದೋಷ ಎನ್ನುವುದಾದರೆ ಕಾಂಗ್ರೆಸ್, ಜಾರ್ಖಂಡ್ ನಲ್ಲಿ ಹೇಗೆ ಗೆದ್ದಿತು?. ಸೋತ ಕಾರಣಕ್ಕೆ ಈ ರೀತಿ ಅಪ್ರಬುದ್ಧರಂತೆ ಮಾತಾಡಬಾರದುʼ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News