ಪ್ರವಾಸಿಗರ ಸುರಕ್ಷಿತ ರವಾನೆಗೆ ಟಿಕೆಟ್ ದರ ಹೆಚ್ಚಿಸದಿರಲು ವೈಮಾನಿಕ ಕಂಪನಿಗಳಿಗೆ ಸೂಚನೆ : ಪ್ರಹ್ಲಾದ್‌ ಜೋಶಿ

Update: 2025-04-23 12:23 IST
ಪ್ರವಾಸಿಗರ ಸುರಕ್ಷಿತ ರವಾನೆಗೆ ಟಿಕೆಟ್ ದರ ಹೆಚ್ಚಿಸದಿರಲು ವೈಮಾನಿಕ ಕಂಪನಿಗಳಿಗೆ ಸೂಚನೆ : ಪ್ರಹ್ಲಾದ್‌ ಜೋಶಿ

PC: x.com/JoshiPralhad

  • whatsapp icon

ಹೊಸದಿಲ್ಲಿ: ಕಾಶ್ಮೀರದ ಪಹಲ್ಗಾಮ್‌ನಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ವೈಮಾನಿಕ ಕಂಪನಿಗಳು ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಈಗಾಗಲೇ ಕಾಶ್ಮೀರದ ಪ್ರವಾಸಿ ತಾಣಗಳಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ. ಮೃತರ ದೇಹಗಳನ್ನು ತರಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಟಿಕೆಟ್ ದರ ಹೆಚ್ಚಿಸದಿರಲು ಸೂಚನೆ:

ಭಯೋತ್ಪಾದನಾ ಕೃತ್ಯ ನಡೆದ ಸ್ಥಳದಿಂದ ಹಾಗೂ ಕಾಶ್ಮೀರದ ಇತರೆ ಪ್ರವಾಸಿ ತಾಣಗಳಿಂದ ಪ್ರವಾಸಿಗರ ರಕ್ಷಣಾ ಕಾರ್ಯ ನಡೆದಿದೆ. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಹೆಚ್ಚಿನ ಟಿಕೆಟ್ ದರ ವಿಧಿಸದಿರುವಂತೆ ವೈಮಾನಿಕ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ವಿಮಾನಯಾನ ಸಚಿವರೊಂದಿಗೆ ಚರ್ಚೆ:

ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ನಾಗರೀಕ ವಿಮಾನಯಾನ ಸಚಿವರೊಂದಿಗೂ ಮಾತನಾಡಿದ್ದೇನೆ. ಏರ್ ಲೈನ್ ಟಿಕೆಟ್ ದರದ ಕುರಿತು ಗಮನಹರಿಸಲು ಡಿಜಿಸಿಎಗೂ ಸೂಚನೆ ನೀಡಿದ್ದೇನೆ ಎಂದು ಜೋಶಿ ತಿಳಿಸಿದರು.

ಕನ್ನಡಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ: ಕಾಶ್ಮೀರದ ಪ್ರವಾಸಿ ತಾಣಗಳಿಂದ ಕನ್ನಡಿಗರು ಸೇರಿದಂತೆ ಪ್ರವಾಸಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಜೋಶಿ ತಿಳಿಸಿದರು.

ಜಮ್ಮು-ಕಾಶ್ಮೀರದಲ್ಲಿ 2019ರಿಂದ ಇತ್ತೀಚಿನ ವರ್ಷಗಳಲ್ಲಿ ಶಾಂತಿ ನೆಲೆಸಿದ್ದನ್ನು ಸಹಿಸದೆ ಹೇಡಿಗಳು ಇಂಥ ಹೇಯ ಕೃತ್ಯವೆಸಗಿದ್ದಾರೆ. ಕೇಂದ್ರ ಸರಕಾರ ಇದಕ್ಕೆ ತಕ್ಕ ಉತ್ತರ ಕೊಡಲಿದೆ ಎಂದು  ಜೋಶಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News