‍ಅಶ್ಲೀಲ ವಿಡಿಯೋ ಪ್ರಕರಣ | ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಸಾಧ್ಯತೆ

Update: 2024-04-29 08:39 GMT

ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜೆಡಿಎಸ್ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗುತ್ತಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಇನ್ನಷ್ಟು ಅನಾಹುತ ನಿಯಂತ್ರಿಸಲು ತುರ್ತು ಆದೇಶವನ್ನು ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News