ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್‌ ನಿರ್ಬಂಧ

Update: 2024-05-06 09:57 GMT

Photo: X/ srinivasiyc

ಬೆಂಗಳೂರು:ಹಾಸನದ ಬಿಜೆಪಿ- ಜೆಡಿಎಸ್ ಅಭ್ಯರ್ಥಿ  ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ನಿರ್ಬಂಧ ಹೇರಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳವುದನ್ನು ನಿರ್ಬಂಧಿಸುವವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರು ಎಚ್. ಡಿ ದೇವೇಗೌಡ ಮತ್ತು ಎಚ್. ಡಿ ಕುಮಾರಸ್ವಾಮಿ ಹೆಸರು ಬಳಸಂತೆ ಮಾಧ್ಯಮಗಳ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ. ಮಾಧ್ಯಮಗಳಲ್ಲಿ ತಮ್ಮ ಹೆಸರು ಬಳಸುವುದರಿಂದ ತಮ್ಮ ಘನತೆ, ಗೌರವಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು.‌ ಮನವಿ ಆಲಿಸಿದ ನ್ಯಾಯಾಧೀಶರು ಮಾಧ್ಯಮಗಳು ಸತ್ಯಕ್ಕೆ ದೂರವಾದ, ಆಧಾರ ರಹಿತ ಸುದ್ದಿಗಳನ್ನು ಅರ್ಜಿದಾರರ ವಿರುದ್ಧ ಪ್ರಸಾರ ಮಾಡದಂತೆ ನಿರ್ಬಂಧ‌ ವಿಧಿಸಿ ಪ್ರತಿವಾದಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News