ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಇಬ್ಬರು ಹೆಚ್ಚುವರಿ ಎಸ್‍ಪಿಪಿ ದಿಢೀರ್ ರಾಜೀನಾಮೆ

Update: 2024-06-11 14:49 GMT

ಪ್ರಜ್ವಲ್ ರೇವಣ್ಣ 

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ದ ಪರವಾಗಿ ಕೋರ್ಟ್‍ನಲ್ಲಿ ವಾದಿಸಲು ರಾಜ್ಯ ಸರಕಾರ ನೇಮಿಸಿದ್ದ ಇಬ್ಬರು ಹೆಚ್ಚುವರಿ ಎಸ್‍ಪಿಪಿ ದಿಢೀರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದ್ದು, ಚರ್ಚೆಗೆ ಗ್ರಾಸವಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್‍ನಲ್ಲಿ ವಾದಿಸಲು ರಾಜ್ಯ ಸರಕಾರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳಾಗಿ ಜಾಯ್ನಾ ಕೊಥಾರಿ ಹಾಗೂ ಬಿ.ಎನ್.ಜಗದೀಶ್ ಅವರನ್ನು ನೇಮಿಸಿತ್ತು. ಆದರೆ, ಮಂಗಳವಾರ ಈ ಇಬ್ಬರೂ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್‌ಐಟಿ ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಿಎನ್ ಜಗದೀಶ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿತ್ತು. ಆನಂತರ, ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‍ಗಳ ಮುಂದೆ ಪ್ರಾಸಿಕ್ಯೂಷನ್‍ನ್ನು ಸಮರ್ಥಿಸಲು ರಾಜ್ಯ ಸರಕಾರವು, ಹಿರಿಯ ವಕೀಲರಾದ ಅಶೋಕ್ ಎನ್.ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್‍ಪಿಪಿಗಳಾಗಿ ರಾಜ್ಯ ಸರಕರ ನೇಮಕ ಮಾಡಿತ್ತು.

ಇನ್ನೊಂದೆಡೆ, ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕಾರಗೃಹ ಪರಪ್ಪನ ಅಗ್ರಹಾರದಲ್ಲಿ ಅವರನ್ನು ಇರಿಸಲಾಗಿದ್ದು, ವಿಚಾರಣಾಧೀನ ಕೈದಿ ಸಂಖ್ಯೆ “5664” ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News