ವಿಧಾನಸಭೆಯಲ್ಲಿ ಏಳು ವಿಧೇಯಕಗಳ ಮಂಡನೆ
Update: 2024-02-20 14:43 GMT
ಬೆಂಗಳೂರು : 2024ನೆ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ(ಜಾಹಿರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆ) ವಿಧೇಯಕ ಸೇರಿದಂತೆ ಏಳು ವಿಧೇಯಕಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು.
2024ನೆ ಸಾಲಿನ ಕರ್ನಾಟಕ ಪೊಲೀಸ್(ತಿದ್ದುಪಡಿ) ವಿಧೇಯಕ, ಅಂತರ್-ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ(ತಿದ್ದುಪಡಿ) ವಿಧೇಯಕ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕವನ್ನು ಮಂಡನೆ ಮಾಡಲಾಯಿತು.
2024ನೆ ಸಾಲಿನ ಗದಗ-ಬೆಟ್ಟಗೆರಿ ವ್ಯಾಪಾರ, ಸಂಸ್ಕೃತಿ, ವಸ್ತುಪ್ರದರ್ಶನ ಪ್ರಾಧಿಕಾರ ವಿಧೇಯಕ, ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಸ್ಟ್ಯಾಂಪು ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಲಾಯಿತು.