ಸಿವಿಲ್ ಪ್ರಕ್ರಿಯಾ ಸಂಹಿತೆಗೆ ರಾಷ್ಟ್ರಪತಿ ಅಂಕಿತ: ಸಚಿವ ಎಚ್.ಕೆ.ಪಾಟೀಲ್

Update: 2024-03-04 16:05 GMT

ಬೆಂಗಳೂರು: ರಾಜ್ಯ ಸರಕಾರವು ಸಿವಿಲ್ ಪ್ರಕ್ರಿಯಾ ಸಂಹಿತೆಗೆ ಮಾಡಿದ್ದ ತಿದ್ದುಪಡಿಗೆ ರಾಷ್ಟ್ರಪತಿ ಅಂಕಿತ ಹಾಕಿರುವುದರಿಂದ, ಬಡವರು, ಸಣ್ಣ, ಅತಿಸಣ್ಣ ರೈತರು ಮತ್ತು ದುರ್ಬಲ ವರ್ಗದವರು, ಆರ್ಥಿಕವಾಗಿ ಹಿಂದುಳಿದ ವರ್ಗದವರು ನ್ಯಾಯಾಲಯಗಳಲ್ಲಿ ಸಿವಿಲ್ ವ್ಯಾಜ್ಯಗಳಲ್ಲಿ ಆರು ತಿಂಗಳಿಗಿಂತ ಹೆಚ್ಚು ಕಾಲಾವಧಿ ನ್ಯಾಯದಾನಕ್ಕಾಗಿ ಕಾಯಬೇಕಿಲ್ಲ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2023ನ್ನು ವಿಧಾನಸಭೆಯಲ್ಲಿ ಕಳೆದ ಸಾಲಿನ ಜು.18ರಂದು ಮಂಡಿಸಲಾಯಿತು. ಜು.19ರಂದು ವಿಧಾನಸಭೆ ಹಾಗೂ ಜು.20ರಂದು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು ಎಂದರು.

ರಾಷ್ಟ್ರತಿಯ ಅಂಕಿತ ಈ ವಿಧೇಯಕಕ್ಕೆ ಅಗತ್ಯವಿದ್ದುದ್ದರಿಂದ ರಾಜ್ಯಪಾಲರು ರಾಷ್ಟ್ರಪತಿಗೆ ವಿಧೇಯಕ ಕಳುಹಿಸಿಕೊಟ್ಟಿದ್ದರು. ಇದೀಗ ರಾಷ್ಟ್ರಪತಿ ಈ ವಿಧೇಯಕಕ್ಕೆ ಅಂಕಿತ ಹಾಕಿರುವುದರಿಂದ, ಈ ವರ್ಗಗಳ ಜನರ ಪಾಲಿಗೆ ನ್ಯಾಯದಾನ ಮತ್ತಷ್ಟು ಸುಲಭವಾಗಲಿದೆ. ಈ ಕಾಯ್ದೆಯ ಅನುಷ್ಠಾನಕ್ಕೆ ಅಗತ್ಯವಿರುವ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇಂದಿನಿಂದಲೆ ಜಾರಿಗೆ ಬರಲಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News