ಕೆಎಸ್ಸಾರ್ಟಿಸಿಯ ವಿಮಾ ಯೋಜನೆಗೆ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿಯ ಗರಿ

Update: 2023-11-18 17:23 GMT

ಸಾಂದರ್ಭಿಕ ಚಿತ್ರ

ಬೆಂಗಳೂರು, ನ.18: ರಾಜ್ಯ ಸರಕಾರದ ಸಾರಿಗೆ ನಿಗಮವಾದ ಕೆಎಸ್ಸಾರ್ಟಿಸಿ ಮಡಿಲಿಗೆ ದೇಶದ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ ಜಾರಿ ಮಾಡಿದ ವಿನೂತನ 1 ಕೋಟಿ ರೂ. ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ- 2023 ಒಲಿದಿದೆ.

ನವದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು, 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ಪ್ರಶಸ್ತಿ ನೀಡುತ್ತಾ ಬಂದಿದೆ.

ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ

ಸ್ಕಾಚ್ ಇಂಡಿಯಾ ರವರು, ಶನಿವಾರ ಆಯೋಜಿಸಿದ 95ನೇ ಸ್ಕಾಚ್ ಸಮಿತ್‌ , ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮೀರ್ ಕೊಚ್ಚರ್ ಅಧ್ಯಕ್ಷರು, ಸ್ಕಾಚ್ ಗ್ರೂಪ್ ರವರು ನಿಗಮವು ತನ್ನ ಸಿಬ್ಬಂದಿಗಳಿಗಾಗಿ ಜಾರಿ ಮಾಡಿದ ವಿನೂತನ 1 ಕೋಟಿ ರೂ. ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ಎನ್.ಕೆ. ಬಸವರಾಜು, ಮುಖ್ಯ ತಾಂತ್ರಿಕ ಶಿಲ್ಪಿ, ಬಿ. ಶ್ರೀನಿವಾಸ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಮೈಸೂರು ವಿಭಾಗ ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ನಿಗಮವು ಈ ಯೋಜನೆ ಅಡಿ ಇದುವರೆಗೂ ತನ್ನ 9 ಸಿಬ್ಬಂದಿಗಳ ಅವಲಂಭಿತರಿಗೆ ತಲಾ 1 ಕೋಟಿಯ ಅಪಘಾತ ವಿಮಾ ಪರಿಹಾರ ಚೆಕ್ ವಿತರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News