ಆನೆ ಹಾವಳಿ ತಡೆ | ತಮಿಳುನಾಡು ಮಾದರಿ ಅಧ್ಯಯನಕ್ಕೆ ಈಶ್ವರ್ ಖಂಡ್ರೆ ಸೂಚನೆ

Update: 2024-12-05 15:41 GMT

ಈಶ್ವರ್ ಖಂಡ್ರೆ

ಬೆಂಗಳೂರು : ಅರಣ್ಯದಂಚಿನ ಗ್ರಾಮಗಳಲ್ಲಿ ಜೀವ ಮತ್ತು ಬೆಳೆ ಹಾನಿ ಉಂಟು ಮಾಡುತ್ತಿರುವ ಕಾಡಾನೆ ಮತ್ತು ಕಾಡೆಮ್ಮೆ ಹಾವಳಿ ತಡೆಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಡಾನೆ ಹಾವಳಿಗೆ ಸದ್ಯದ ಸಾಬೀತಾದ ಪರಿಹಾರ ರೈಲ್ವೆ ಬ್ಯಾರಿಕೇಡ್ ಅಳವಡಿಕೆಯಾಗಿದ್ದು, ಪ್ರತಿ ಕಿ.ಮೀ. ಬ್ಯಾರಿಕೇಡ್ ಅಳವಡಿಕೆಗೆ ಸುಮಾರು 1.50 ಕೋಟಿ ರೂ. ವೆಚ್ಚವಾಗುತ್ತಿದೆ. ಮಿಗಿಲಾಗಿ ರೈಲ್ವೆ ಹಳಿಗಳೂ ಸಿಗುವುದಿಲ್ಲ. ತಮಿಳುನಾಡಿನಲ್ಲಿ ಅಳವಡಿಸಿರುವ ಉಕ್ಕಿನ ಹಗ್ಗದ ತಡೆಗಳಿಗೆ(ಸ್ಟೀಲ್ ರೋಪ್) ಪ್ರತಿ ಕಿ.ಮೀ.ಗೆ 45 ಲಕ್ಷ ರೂ.ವೆಚ್ಚವಾಗುತ್ತದೆ ಎನ್ನಲಾಗಿದ್ದು, ಈ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.

ತುಲನಾತ್ಮಕ ವರದಿಗೂ ಸೂಚನೆ: ರಾಜ್ಯದಲ್ಲಿ ಈಗಾಗಲೇ 312 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಮುನ್ನ ಮತ್ತು ಅಳವಡಿಕೆ ನಂತರದ ಜೀವಹಾನಿ ಮತ್ತು ಬೆಳೆಹಾನಿ ಕುರಿತಂತೆ ತುಲನಾತ್ಮಕ ವರದಿ ಸಲ್ಲಿಸುವಂತೆಯೂ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News