ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

Update: 2024-01-19 06:05 GMT

ಕಲಬುರಗಿ, ಜ.19: ಮಹಾರಾಷ್ಟ್ರದ ಸೋಲಾಪುರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಿದರು.

ಹೊಸದಿಲ್ಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಗ್ಗೆ 9:30ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯನ್ನು ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರ ವಿಶಾಲ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಚ ನೀಡಿ ಪ್ರಧಾನಿಯನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ್ ಗುತ್ತೇದಾರ, ಮಾಲಿಕಯ್ಯ ಗುತ್ತೇದಾರ, ಅಮರನಾಥ ಪಾಟೀಲ, ಬಿಜೆಪಿ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಉಪಸ್ಥಿತರಿದ್ದರು.

ನಂತರ ಪ್ರಧಾನಮಂತ್ರಿ ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News