ಖಾಸಗಿ ಬಸ್‌ ಪಲ್ಟಿ; ಹಲವು ಪ್ರಯಾಣಿಕರಿಗೆ ಗಾಯ

Update: 2023-10-19 05:51 GMT

ಹುಬ್ಬಳ್ಳಿ: ಚಾಲಕನ ನಿಯಂತ್ರಣ ಖಾಸಗಿ ಬಸ್‌ ಒಂದು ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ ವರದಿಯಾಗಿದೆ. 

ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದ್ದು, ಬಸ್ಸಿನೊಳಗೆ ಇದ್ದ ಹಲವು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. 

ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News