ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ನೀತಿ ಸಂಹಿತೆ ಸಡಿಲಗೊಳಿಸಿ : ECಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

Update: 2024-05-12 13:12 GMT

ಬೆಂಗಳೂರು : ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆಯಿಂದ ವಿನಾಯತಿ ನೀಡಬೇಕೆಂದು ಕೋರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ರವಿವಾರ ಈ ಕುರಿತು ಪತ್ರ ಬರೆದಿರುವ ಅವರು, ‘ರಾಜ್ಯದಲ್ಲಿ ಈಗಾಗಲೇ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ರಾಜ್ಯದ ಬಹುತೇಕ ಎಲ್ಲ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ಆ ಹಿನ್ನೆಲೆಯಲ್ಲಿ ಬರ ಹಾಗೂ ಕುಡಿಯುವ ನೀರು ನಿರ್ವಹಣೆ ಕುರಿತು ಸಭೆ ನಡೆಸಲು ಹಾಗೂ ಹಾಗೂ ಸಭೆಯ ನಿರ್ಧಾರಗಳಿಗೆ ನೀತಿ ಸಂಹಿತೆಯಿಂದ ವಿನಾಯಿತಿ ನೀಡಬೇಕು ಎಂದು ಕೋರಿದ್ದಾರೆ.

ಹವಾಮಾನ ಇಲಾಖೆ ರಾಜ್ಯದಲ್ಲಿ ಪ್ರಸಕ್ತ ವರ್ಷ ಮುಂಗಾರು ಮಳೆ ವಿಳಂಬವಾಗುವ ವರದಿ ನೀಡಿರುವುದರಿಂದ ಮುಂದಿನ ಎರಡು ತಿಂಗಳ ವರೆಗೆ ಜನ ಹಾಗೂ ಜಾನುವಾರುಗಳಿಗೆ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ನಿರ್ವಹಣೆ ಅತ್ಯವಶ್ಯಕವಾಗಿರುತ್ತದೆ ಎಂದು ಅವರು ತಮ್ಮ ಪತ್ರದಲ್ಲಿ ಆಯೋಗದ ಗಮನ ಸೆಳೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News