ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಪ್ರಕರಣ | ಸರಕಾರದಿಂದ ವಿವರಣೆ ಕೋರಿದ ರಾಜ್ಯಪಾಲರು?

Update: 2024-09-23 14:15 GMT

ಪ್ರಿಯಾಂಕ್ ಖರ್ಗೆ/ಎಂ.ಬಿ.ಪಾಟೀಲ್

ಬೆಂಗಳೂರು : ಅರ್ಕಾವತಿ ಬಡಾವಣೆ ರೀಡೂ ಪ್ರಕರಣ ಸಂಬಂಧದ ದಾಖಲೆ ಕೋರಿದ್ದ ರಾಜ್ಯಪಾಲರು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಪ್ರಮುಖ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರ ಪ್ರಕರಣದಲ್ಲಿ ವಿವರಣೆ ಕೋರಿ, ಸರಕಾರಕ್ಕೆ ನೋಟಿಸ್ ನೀಡಿದೆ ಎಂದು ಗೊತ್ತಾಗಿದೆ.

‘ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್’ಗೆ ಕೆಐಎಡಿಬಿಯಿಂದ 5 ಎಕರೆ ಭೂಮಿ ಪಡೆದುಕೊಂಡಿದ್ದು, ಈ ಕುರಿತಂತೆಯೂ ವಿವರ ಒದಗಿಸಬೇಕು’ ಎಂದು ರಾಜಭವನ ಸೂಚನೆ ನೀಡಿದ್ದು, ರಾಜ್ಯ ಸರಕಾರ ಹಾಗೂ ರಾಜಭವನದ ನಡುವಿನ ಸಂಘರ್ಷ ತಾರಕಕ್ಕೇರುವ ಸಾಧ್ಯತೆಗಳಿವೆ.

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಬಗ್ಗೆಯೂ ವಿವರ ಕೋರಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆ.27ರಂದು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆ ಸಮೇತ ದೂರು ನೀಡಿದ್ದರು. ಸಚಿವರಿಬ್ಬರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದರು.

ಇದೇ ವೇಳೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ, ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ, ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡುವಂತೆ ಕೋರಿದ್ದರು. ಈ ದೂರುಗಳನ್ನು ರಾಜಭವನ ಪರಿಶೀಲಿಸಿ, ಕಾನೂನು ಸಲಹೆ ಪಡೆದ ನಂತರ ಸರಕಾರದಿಂದ ವಿವರಣೆ ಕೋರಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News