ಪಾಕ್ ಪರ ಘೋಷಣೆ, ಕೆಫೆ ಸ್ಫೋಟ ಪ್ರಕರಣ | ಸಿಎಂ ಜೊತೆ ರಾಜ್ಯಪಾಲರ ಸಮಾಲೋಚನೆ
Update: 2024-03-04 22:17 IST
Photo : X/@TCGEHLOT
ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ಕೆಫೆಯಲ್ಲಿನ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾಲೋಚನೆ ನಡೆಸಿದ್ದಾರೆ.
ಸೋಮವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಒಂದು ಗಂಟೆಗೂ ಹೆಚ್ವು ಕಾಲ ರಾಜ್ಯಪಾಲರ ಜೊತೆಗೆ ಚರ್ಚಿಸಿದ್ದಾರೆ.
ಪಾಕ್ ಪರ ಘೋಷಣೆ ಪ್ರಕರಣದಲ್ಲಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ದೂರು ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯಪಾಲರು ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.