ಮೈಸೂರು | ಮಹಿಷ ದಸರಾ ಆಚರಣೆಗೆ ಷರತ್ತು ಬದ್ಧ ಅನುಮತಿ

Update: 2023-10-12 11:28 GMT

ಮೈಸೂರು ನಗರ- ಸಾಂದರ್ಭಿಕ ಚಿತ್ರ

ಮೈಸೂರು: ಮಹಿಷ ದಸರಾ ಆಚರಣೆಗೆ ಮೈಸೂರು ನಗರ ಪೊಲೀಸ್‌ ಕಮೀಷನರ್ ರಮೇಶ್‌ ಬಾನೋತ್ ಅವರು ಷರತ್ತು ಬದ್ಧ ಅನುಮತಿ ನೀಡಿದ್ದಾರೆ. 

ಮೆರವಣಿಗೆ/ಪ್ರತಿಭಟನೆ ನಡೆಸದೆ ಪುರಭವನದಲ್ಲಿ ಕಾರ್ಯಕ್ರಮ ನಡೆಸಲು ಮಹಿಷ ದಸರಾ ಆಚರಣೆ ಸಮಿತಿಗೆ ಅನುಮತಿ ನೀಡಲಾಗಿದೆ. 

ಇನ್ನು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗುರುವಾರ ಮಧ್ಯರಾತ್ರಿಯಿಂದ ಶನಿವಾರ (ಅ.14) ಬೆಳಗಿನವರೆಗೆ ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಮತ್ತು ಅದಕ್ಕೆ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳು ಆಯೋಜನೆಯಾಗಿರುವ ಕಾರಣ ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಮೈಸೂರು ನಗರ ಪೊಲೀಸ್‌ ಕಮೀಷನರ್ ರಮೇಶ್‌ ಬಾನೋತ್ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. 

ನಗರದ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಗುರುವಾರ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಯುಕ್ತರು, ‌ಮಹುಷ ದಸರಾ ಆಚರಣೆಗೆ ನಗರದ ಪುರಭನದ ಆವರಣದಲ್ಲಿ ಷರತ್ತು ಬದ್ಧ ಅವಕಾಶ ನೀಡಲಾಗಿದ್ದು. ಪುರಭವನದ ಒಳಗಡೆ ಹೊರತು ಪಡಿಸಿ ಹೊರಗಡೆ 5 ಜನರಿಗಿಂತ ಹೆಚ್ಚು ಜನ ಗುಂಪು ಸೇರುವುದು, ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು, ಸಾರ್ವಜನಿಕ ಪ್ರಚಾರ, ಧ್ವನಿವರ್ಧಕ ಬಳಸುವುದು, ಫ್ಲೆಕ್ಸ್ ಬ್ಯಾನರ್ ಅಳವಡಿಸುವುದು, ಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ನಡೆಸುವುದುನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ʼಮದುವೆ, ಶವ ಸಂಸ್ಕರಾ, ಶಾಲಾ ಕಾಲೇಜುಗಳಗೆ ತೆರಳುವುದಕಕ್ಕೆ ವಿನಾಯಿತಿ ನೀಡಲಾಗಿದೆʼ ಎಂದು ತಿಳಿಸಿದರು.

ʼಪುರಭವನದಲ್ಲಿ ನಡೆಯುವ ಮಹಿಷ ದಸರಾ ಆಚರಣೆಗೆ 7 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದು, ಆವರಣದೊಳಗೆ ನಡೆಯುವ ಕಾರ್ಯಕ್ರಮಕ್ಕೆ ಅಕ್ಟೋಬರ್ 13 ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಮಾತ್ರ ಕಾರ್ಯಕ್ರಮ ಮಾಡಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಯಾವುದೇ ಧಾರ್ಮಿಕ ಬಾವನೆಗೆ ಧಕ್ಕೆಯುಂಟಾಗದಂತೆ ಕಾರ್ಯಕ್ರಮ ನಡೆಸಬೇಕು ಎಂದು ಷರತ್ತು ವಿಧಿಸಲಾಗಿದೆʼ ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News