ಸಿಐಡಿಗೆ ಪ್ರತ್ಯೇಕ ನ್ಯಾಯಾಲಯ ಸ್ಥಾಪನೆಗೆ ಪ್ರಸ್ತಾವನೆ

Update: 2024-10-27 15:46 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಅಪರಾಧ ತನಿಖಾ ಇಲಾಖೆ (ಸಿಐಡಿ)ಯು ತಾನು ತನಿಖೆ ನಡೆಸುವ ಪ್ರಕರಣಗಳ ವಿಚಾರಣೆಗೆ ಜನಪ್ರತಿನಿಧಿಗಳ ನ್ಯಾಯಾಲಯಲದ ಮಾದರಿಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಈ ಪ್ರಸ್ತಾವನೆಗೆ ಗೃಹ ಇಲಾಖೆ ಕೂಡ ಸಕಾರಾತಾತ್ಮಕವಾಗಿ ಸ್ಪಂದಿಸಿದ್ದು, ಕಾನೂನು ಇಲಾಖೆ ಜತೆ ಸಮಾಲೋಚಿಸಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ನಿರ್ಧಾರವನ್ನು ಸರಕಾರ ಪ್ರಕಟಿಸಲಿದೆ ಎಂದು ಮೂಗಳು ತಿಳಿಸಿವೆ.

ಪ್ರಸುತ್ತ ಅಪರಾಧ ಕೃತ್ಯಗಳ ಸಂಬಂಧ ಎಫ್‍ಐಆರ್ ದಾಖಲಾಗುವ ವ್ಯಾಪ್ತಿಯ ನ್ಯಾಯಾಲಯಕ್ಕೆ ಸಿಐಡಿ ಆರೋಪ ಪಟ್ಟಿ ಸಲ್ಲಿಸುತ್ತಿದ್ದು, ಆ ನ್ಯಾಯಾಲದಲ್ಲಿ ಪ್ರಕರಣಗಳ ವಿಚಾರಣೆ ನಡೆಯುತ್ತದೆ. ಹೀಗಾಗಿ ನಗರದಲ್ಲಿಯೇ ಸಿಐಡಿ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಸರಕಾರಕ್ಕೆ ಸಿಐಡಿ ಡಿಜಿಪಿ ಡಾ. ಎಂ.ಎ.ಸಲೀಂ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News